Breaking
10 Feb 2026, Tue

ಹುಲಿಮಂಗಲದಲ್ಲಿ ಪಿಡಿಓ ಕಾರ್ಯವೈಖರಿ ಖಂಡಿಸಿ ದಲಿತ ಸಂಘರ್ಷ ಸಮಿತಿ ಪರಿವರ್ತನವಾದ ಪ್ರತಿಭಟನೆ.

ಹುಲಿಮಂಗಲ ಗ್ರಾಮ ಪಂಚಾಯಿತಿ ಮುಂಭಾಗ ದಲಿತ ಸಂಘರ್ಷ ಸಮಿತಿ ಪರಿವರ್ತನ ವಾದದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಹುಲಿಮಂಗಲ ಪಂಚಾಯಿತಿ ಪಿಡಿಓ ಕೃಷ್ಣಪ್ಪ ಕಾರ್ಯವೈಖರಿ ವಿರೋಧಿಸಿ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಹಾಗೂ ದಲಿತ ವಿರೋಧಿ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಮುಖಂಡರು ಆರೋಪಿಸಿದರು. ಕೂಡಲೇ ಹಿರಿಯ ಅಧಿಕಾರಿಗಳು ಪಿಡಿಓ ಕೃಷ್ಣಪ್ಪ ಮೇಲೆ ಕ್ರಮ ಜರುಗಿಸಬೇಕು ಎಂದು ಡಿಎಸ್‌ಎಸ್‌ ಕಾರ್ಯಕರ್ತರು ಒತ್ತಾಯಿಸಿದರು.

Leave a Reply