Breaking
20 Sep 2026, Sun

ಬನ್ನೇರುಘಟ್ಟ ಮೃಗಾಲಯಕ್ಕೆ ಉಚಿತವಾಗಿ ಆಂಬ್ಯುಲೆನ್ಸ್ ವಿತರಣೆ, ಅರಣ್ಯ ಸಚಿವ ಈಶ್ವರ ಖಂಡ್ರೆ ಹಸ್ತಾಂತರ

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಉಚಿತವಾಗಿ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಲಾಗಿದೆ. ವಿಧಾನಸೌಧದಲ್ಲಿ ಇಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ರವರಿಗೆ ಕಾವೇರಿ ಆಸ್ಪತ್ರೆ ವತಿಯಿಂದ ಆಂಬ್ಯುಲೆನ್ಸ್ ಹಸ್ತಾಂತರ ಮಾಡಲಾಯಿತು. ಮೃಗಾಲಯಕ್ಕೆ ಆಗಮಿಸುವ ಪ್ರವಾಸಿಗರು ಹಾಗೂ ಸಿಬ್ಬಂದಿಗಳಿಗೆ ತುರ್ತು ಸಮಯದಲ್ಲಿ ಅಂಬ್ಯುಲೆನ್ಸ್ ಅವಶ್ಯಕತೆ ಇತ್ತು. ಹೀಗಾಗಿ ಅರಣ್ಯ ಸಚಿವ ಈಶ್ವ‌ರ್ ಖಂಡ್ರೆ ಅಂಬ್ಯುಲೆನ್ಸ್ ನ್ನು ಮೃಗಾಲಯಕ್ಕೆ ಹಸ್ತಾಂತರ ಮಾಡಿದರು. ಮೃಗಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯಸೇನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Leave a Reply