Breaking
21 Jul 2026, Tue

ಬಿ.ಹೊಸಹಳ್ಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಕೋಡಿಹಳ್ಳಿ ಚಂದ್ರಶೇಖರ್ ಪತ್ರಿಕಾಗೋಷ್ಠಿ

ಆನೇಕಲ್ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ರು. ಬಿ. ಹೊಸಹಳ್ಳಿ ಹಾಗೂ ಹಂದೇನಹಳ್ಳಿ ಸುತ್ತಮುತ್ತ ಕೆಐಎಡಿಬಿ 2 ಸಾವಿರ ಎಕರೆ ಭೂಸ್ವಾಧೀನಪಡಿಸಿಕೊಳ್ಳಲು ಸಿದ್ಧತೆ ಮಾಡಿಕೊಂಡಿದೆ.

ರೈತರ ಫಲವತ್ತಾದ ಭೂಮಿಯನ್ನು ಕೈಗಾರಿಕೆಗಳಿಗೆ ನಿಡಲು ಹೊರಟಿರುವ ಸರ್ಕಾರದ ನಡೆಯನ್ನ ಅವರು ಖಂಡಿಸಿದರು. ಕೂಡಲೇ ರಾಜ್ಯಸರ್ಕಾರ ಮತ್ತೊಮ್ಮೆ ಪರಿಶೀಲಿಸಿ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಚಂದ್ರಶೇಖರ್ ಆಗ್ರಹಿಸಿದರು

Leave a Reply