Breaking
20 Sep 2026, Sun

ಬಂಡೆಪಾಳ್ಯದಲ್ಲಿ ಸಿಲಿಂಡರ್ ಸ್ಫೋಟದ ಹಿನ್ನೆಲೆ ಸ್ಥಳಕ್ಕೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಂಡೆಪಾಳ್ಯದಲ್ಲಿ ಎಲ್‌ಪಿಜಿ ಸಿಲಿಂಡ‌ರ್ ಸ್ಪೋಟಗೊಂಡು ಮನೆಯಲ್ಲಿದ್ದ ಹಲವರಿಗೆ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇಂದು ಘಟನಾ ಸ್ಥಳಕ್ಕೆ ಶಾಸಕರಾದ ಸತೀಶ್ ರೆಡ್ಡಿ ಭೇಟಿ ನೀಡಿ ಪರಿಶೀಲನೆಯನ್ನ ನಡೆಸಿದರು. ಸ್ಪೋಟದ ತೀವ್ರತೆಗೆ ಮನೆಯಲ್ಲಿದ್ದ ಕಿಟಕಿ ಬಾಗಿಲುಗಳು ಸಂಪೂರ್ಣವಾಗಿ ಛಿದ್ರವಾಗಿದೆ. ಹಲವರಿಗೆ ಸುಟ್ಟ ಗಾಯಗಳಾಗಿದ್ದು ಅವರನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply