Breaking
21 Jul 2026, Tue

ಮಾದನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಬೆಂ.ಉತ್ತರ ತಾಲ್ಲೂಕಿನ ಮಾದನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗಂಗಾಧ‌ರ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಕೆಂಪಮ್ಮ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಸಂಘದ ನಿರ್ದೇಶಕರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು. ತಮ್ಮನ್ನು ಅವಿರೋಧವಾಗಿ ಸಂಘದ ಎಲ್ಲಾ ನಿರ್ದೇಶಕರಿಗೂ ಅವರು ಧನ್ಯವಾದ ಅರ್ಪಿಸಿದರು.

ಎಲ್ಲರ ಸಹಕಾರದೊಂದಿಗೆ ಸಹಕಾರ ಸಂಘವನ್ನ ಮತ್ತಷ್ಟು ಅಭಿವೃದ್ಧಿಪಡಿಸುವುದಾಗಿ ನೂತನ ಅಧ್ಯಕ್ಷರಾದ ಗಂಗಾಧ‌ರ್ ಭರವಸೆ ನೀಡಿದರು

Leave a Reply