Breaking
20 Sep 2026, Sun

ಅತ್ತಿಬೆಲೆ ಬಳಿಯ ಬಳ್ಳೂರು ರಸ್ತೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಸವಾರ ಸಾವು, ಸ್ಥಳ ಪರಿಶೀಲಿಸಿದ ಡಿವೈಎಸ್‌ಪಿ ಮೋಹನ್

ಆನೇಕಲ್ ತಾಲೂಕಿನ ಬಳ್ಳೂರು ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಬಳ್ಳೂರು ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ವ್ಯಕ್ತಿ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಉಂಟಾಗಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಆನೇಕಲ್ ಉಪ ವಿಭಾಗದ ಡಿವೈಎಸ್‌ಪಿ ಮೋಹನ್ ಹಾಗೂ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply