Breaking
20 Sep 2026, Sun

ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮ ಕಸ ವಿಲೇವಾರಿ, ಬಿಐಎ ಅಧ್ಯಕ್ಷರಾದ ಪ್ರಸಾದ್‌ ನೇತೃತ್ವದಲ್ಲಿ ಪರಿಶೀಲನೆ

ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ವ್ಯಾಪ್ತಿಗೆ ಬರುವ ಕಾಚನಾಯಕನಹಳ್ಳಿ ಸಬ್ ಲೇಔಟ್ ನಲ್ಲಿ ಬಳಿ ಅಕ್ರಮವಾಗಿ ಕಸ ವಿಲೇವಾರಿ ಮಾಡುತ್ತಿದ್ದು ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಹೀಗಾಗಿ ಎಂದು ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷರಾದ ಪ್ರಸಾದ್‌ ನೇತ್ರತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಹೆನ್ನಾಗರ ಪಂಚಾಯಿತಿ ವ್ಯಾಪ್ತಿಯ ಕಸವನ್ನ ತಂದು ಅಕ್ರಮವಾಗಿ ವಿಲೇವಾರಿ ಮಾಡಿ ಕಸಕ್ಕೆ ಬೆಂಕಿ ಹಚ್ಚಲಾಗುತ್ತಿದೆ.

ಇದರಿಂದ ಸುತ್ತಮುತ್ತಲ ಬಡಾವಣೆ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿದೆ. ಕೂಡಲೇ ಇಲ್ಲಿ ಕಸ ಹಾಕುವವರ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು

Leave a Reply