ಬೆಂ. ದಕ್ಷಿಣ ವಿಧಾನಸಭಾ ಕ್ಷೇತ್ರದ ತುರಹಳ್ಳಿ ಸಮೀಪವಿರುವ ಬಿಹೆಚ್‌ಸಿಎಸ್ ಬಡಾವಣೆಯಲ್ಲಿ ಕಾವೇರಿ ಕುಡಿಯುವ ನೀರಿನ ಸಂಪರ್ಕಕ್ಕೆ ಚಾಲನೆ ನೀಡಲಾಗಿದೆ. ಶಾಸಕ ಕೃಷ್ಣಪ್ಪ ಹಾಗೂ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಾಯಿತು. ಹಲವು ವರ್ಷಗಳಿಂದ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ, ಸ್ಥಳೀಯ ಅನುಕೂಲಕ್ಕಾಗಿ ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಪೂರ್ಣಗೊಳಿಸಿ ಇಂದು ನೀರಿನ ಸಂಪರ್ಕಕ್ಕೆ ಚಾಲನೆ ನೀಡಲಾಗಿದೆ
ತುರಹಳ್ಳಿಯ ಬಿಹೆಚ್‌ಸಿಎಸ್ ಬಡಾವಣೆಯಲ್ಲಿ ಕಾವೇರಿ ಕುಡಿಯುವ ನೀರಿನ ಸಂಪರ್ಕಕ್ಕೆ ಶಾಸಕ ಕೃಷ್ಣಪ್ಪ ಚಾಲನೆ

