Breaking
20 Sep 2026, Sun

ಆನೇಕಲ್ ಪಟ್ಟಣದ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ಇಂದು ಶ್ರೀನಿವಾಸ ಕಲ್ಯಾಣೋತ್ಸವ

ಆನೇಕಲ್ ಪಟ್ಟಣದಲ್ಲಿ ಐತಿಹಾಸಿಕ ಶ್ರೀ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ಇಂದು ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ದೇವಾಲಯದ ಪಕ್ಕದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಛತ್ರದ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಕಲ್ಯಾಣೋತ್ಸವ ನಡೆಸಲಾಯಿತು‌. ಸಾವಿರಾರು ಭಕ್ತಾದಿಗಳು ಕಲ್ಯಾಣೋತ್ಸವದಲ್ಲಿ ಭಾಗಿಯಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಕಣ್ತುಂಬಿಕೊಂಡರು. ದೇವರ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು ಜೊತೆಗೆ ಬಂದಿದ್ದ ಭಕ್ತಾದಿಗಳಿಗೆ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು

Leave a Reply