Breaking
20 Sep 2026, Sun

ಜಯನಗರದಲ್ಲಿ ರಕ್ತದಾನ ಶಿಬಿರಕ್ಕೆ ಶಾಸಕ ರಾಮಮೂರ್ತಿ, ನಟಿ ಮಾಳವಿಕಾ ಚಾಲನೆ

ಬೆಂಗಳೂರಿನ ಜಯನಗರ 4ನೇ ಹಂತದಲ್ಲಿ ರಾಷ್ಟೋತ್ಥಾನ ಯೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಜಯನಗರ ಶಾಸಕ ಸಿ ಕೆ ರಾಮಮೂರ್ತಿ ಹಾಗೂ ಚಿತ್ರನಟಿ ಮಾಳವಿಕಾ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು. ನೂರಾರು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಪ್ರತಿಯೊಬ್ಬರು ರಕ್ತದಾನ ಮಾಡುವಂತೆ ಪ್ರೇರೇಪಿಸಿದರು. ರಕ್ತದಾನ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಲಾಭಗಳಿದ್ದು ಪ್ರತಿ ಮೂರು ತಿಂಗಳಿಗೊಮ್ಮೆ ಪ್ರತಿಯೊಬ್ಬರು ರಕ್ತದಾನ ಮಾಡಬೇಕು ಎಂದು ಚಿತ್ರನಟಿ ಮಾಳವಿಕಾ ಜನರಲ್ಲಿ ಮನವಿ ಮಾಡಿದರು.

Leave a Reply