Breaking
25 May 2026, Mon

ಶಾನಬೊಗನಹಳ್ಳಿಯಲ್ಲಿ ಕಾರು- ದ್ವಿಚಕ್ರ ವಾಹನದ ಮಧ್ಯೆ ಅಪಘಾತ, ಓರ್ವನ ಸ್ಥಿತಿ ಚಿಂತಾಜನಕ

ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪವಿರುವ ಶಾನುಭೋಗನಹಳ್ಳಿ ಗ್ರಾಮದಲ್ಲಿ ಕಾರು ಹಾಗೂ ಬೈಕ್‌ ನಡುವೆ ಅಪಘಾತ ಉಂಟಾಗಿ ದ್ವಿಚಕ್ರ ವಾಹನ ಸವಾರ ಚಿಂತಾಜನಕ ಸ್ಥಿತಿಗೆ ತಲುಪಿದ್ದಾನೆ. ತಿರುವಿನಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಯ ಪಕ್ಕದಲ್ಲಿದ್ದ ಕಾಂಪೌಂಡಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿರುವ ಗಾಯಗಳಿಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply