Breaking
20 Sep 2026, Sun

ಗೊಟ್ಟಿಗೆರೆ ಸಮೀಪದ ಹೋಟೆಲ್‌ನಲ್ಲಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ, ಲಕ್ಷಾಂತರ ರೂ. ಮೌಲ್ಯದ ವಸ್ತು ಬೆಂಕಿಗಾಹುತಿ

ಹೊಟೆಲ್ ನಲ್ಲಿ ಎಲ್‌ಪಿಜಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಗಳೂರು ದಕ್ಷಿಣ ವ್ಯಾಪ್ತಿಯ ಗೊಟ್ಟಿಗೆರೆ ಸಮೀಪದ ರುಚಿ ಹೊಟೆಲ್ ನಲ್ಲಿ ಇಂದು ಘಟನೆ ನಡೆದಿದೆ. ಸಿಲಿಂಡ‌ರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಹೋಟೆಲ್ ನಲ್ಲಿ ಇದ್ದ ಹಲವು ವಸ್ತುಗಳು ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಈ ಸಂಬಂಧ ಹುಳಿಮಾವು. ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply