Breaking
20 Sep 2026, Sun

ವಿವಿಧ ಬೇಡಿಕೆ ಈಡೇರಿಕೆಗೆ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ

ಆನೇಕಲ್ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಇಂದು ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರವನ್ನ ನಡೆಸಲಾಯಿತು. ರಾಜ್ಯವ್ಯಾಪಿ 2ನೇ ಹಂತದ ಮುಷ್ಕರಕ್ಕೆ ಗ್ರಾಮ ಆಡಳಿತ ಅಧಿಕಾರಿಗಳು ಕರೆ ನೀಡಿದ್ದು ತಮ್ಮ ಕೆಲವು ಮೂಲಭೂತ ಸೌಕರ್ಯಗಳ ಬೇಡಿಕೆ ಹಾಗೂ ಸೇವಾ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ತಾಲೂಕಿನ ವಿವಿಧ ಭಾಗಗಳ ಗ್ರಾಮ ಆಡಳಿತಾಧಿಕಾರಿಗಳು ಕೆಲಸಕ್ಕೆ ರಜೆ ಹಾಕಿ ಮುಷ್ಕರದಲ್ಲಿ ಭಾಗವಹಿಸಿದ್ದರು.

Leave a Reply