Breaking
20 Sep 2026, Sun

ಜಯನಗರದಲ್ಲಿ ಮೆಟ್ರೋ ಪ್ರಯಾಣದರ ಏರಿಕೆ ಖಂಡಿಸಿ ಶಾಸಕ ರಾಮಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ, ಸರ್ಕಾರದ ವಿರುದ್ಧ ಆಕ್ರೋಶ

ಬೆಂಗಳೂರು ಮೆಟ್ರೋ ಪ್ರಯಾಣದರ ಏರಿಕೆ ಮಾಡಿರುವ ಕ್ರಮ ಖಂಡಿಸಿ ಜಯನಗರ ಮೆಟ್ರೋ ನಿಲ್ದಾಣದ ಮುಂಭಾಗ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ಜಯನಗರ ಶಾಸಕ ಸಿ ಕೆ ರಾಮಮೂರ್ತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಬಿಎಂಆರ್‌ಸಿಎಲ್ ವತಿಯಿಂದ ಬೆಂಗಳೂರಿನಲ್ಲಿ ಶೇ 46% ಮೆಟ್ರೋ ಪ್ರಯಾಣ ದರವನ್ನು ಏರಿಕೆ ಮಾಡಿರುವುದರಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ರಾಮಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ದರ ಏರಿಕೆ ಆದೇಶ ಹಿಂಪಡೆಯಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು

Leave a Reply