Breaking
21 Jul 2026, Tue

ಸಂಜಯ್ ನಗರದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ ಮಾಡಿದ ನಗರ ಅಭಿವೃದ್ಧಿ ಸಚಿವ ಭೈರತಿ ಸುರೇಶ್

ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ ಮಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ

ಬೆಂಗಳೂರಿನ ಸಂಜಯ್ ನಗರದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಉದ್ಘಾಟನೆ ಮಾಡಿದರು. ಸಂಜಯ್ ನಗರ ಸುತ್ತಮುತ್ತ ಹಲವು ವರ್ಷಗಳಿಂದ ಬಿಬಿಎಂಪಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರ್ಮಾಣ ಮಾಡಿ ಕೊಡುವಂತೆ ಸಾರ್ವಜನಿಕರು ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಅತ್ಯಾಧುನಿಕವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನ ನಿರ್ಮಾಣ ಮಾಡಿ ಇಂದು ಲೋಕಾರ್ಪಣೆ ಮಾಡಲಾಯಿತು. ಮಾಜಿ ಬಿಬಿಎಂಪಿ ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Leave a Reply