ಉಪ ಚುನಾವಣೆ ಕಾವು ಜೋರಾಗುತ್ತಿದೆ. ಈ ನಡುವೆ ರಾಜಕೀಯ ನಾಯಕರ ನಡುವೆ ಆರೋಪ – ಪ್ರತ್ಯಾರೋಪ ಜೋರಾಗಿದೆ. ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಹೈವೋಲ್ಟೇಜ್ ಪಡೆದುಕೊಂಡಿದೆ. ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವುದು ಬಹುತೇಕ ಫಿಕ್ಸ್ ಆಗಿದೆ.ಇದೀಗ ಅವರ ಬಗ್ಗೆ ಗಂಭೀರ ಆರೋಪವೊಂದು ಕೇಳಿ ಬಂದಿದೆ. ರಾಜ್ಯದಲ್ಲಿ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ಉಪ ಚುನಾವಣೆಗಳು ಹಲವು ಕಾರಣಕ್ಕೆ ಮಹತ್ವ ಪಡೆದುಕೊಂಡಿದೆ. ಇನ್ನು ಚನ್ನಪಟ್ಟಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಸೆಡ್ಡು ಹೊಡೆದಿರುವ ಸಿ.ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿ.ಪಿ ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ಯಾವುದೇ ಪಕ್ಷದಿಂದ ನಿಂತರೂ, ಇಲ್ಲ ಪಕ್ಷೇತರರಾಗಿ ಸ್ಪರ್ಧೆ ಮಾಡಿದರೂ ಅವರು ಗೆಲ್ಲುವುದು ಖಚಿತ ಎನ್ನುವ ಅಭಿಪ್ರಾಯವೇ ರಾಜಕೀಯ ವಲಯದಲ್ಲಿ ಇದೆ. ಇದೀಗ ಅವರು ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಂತೆಯೇ ಎಂಎಲ್‌ಸಿ ಎಚ್ ವಿಶ್ವನಾಥ್ ಅವರು ಸಿ.ಪಿ ಯೋಗೇಶ್ವರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಸಿ.ಪಿ ಯೋಗೇಶ್ವರ್ ಒಬ್ಬ ಫ್ರಾಡ್ ಕಣ್ರಿ. ಯೋಗೇಶ್ವರ್ ಅನ್ನು ಸೈನಿಕ ಎಂದು ಕರೆಯಬಾರದು ಎಂದಿದ್ದಾರೆ.

