Breaking
21 Jul 2026, Tue

ಚಿಕ್ಕಹೊಸಹಳ್ಳಿ VSSN ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣಮೂರ್ತಿ,ಉಪಾಧ್ಯಕ್ಷರಾಗಿ ನಾಗರಾಜು ಅವಿರೋಧ ಆಯ್ಕೆ

ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣಮೂರ್ತಿ

ಆನೇಕಲ್ ತಾಲೂಕಿನ ಚಿಕ್ಕ ಹೊಸಹಳ್ಳಿಯ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಸರ್ವ ಸದಸ್ಯರು ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಿದರು. ಆಯ್ಕೆಯಾದ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಗ್ರಾಮಸ್ಥರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘವನ್ನು ಎಲ್ಲರ ಸಹಕಾರದೊಂದಿಗೆ ಅಭಿವೃದ್ಧಿಪಡಿಸುವುದಾಗಿ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಭರವಸೆ ನೀಡಿದರು

Leave a Reply