Breaking
21 Sep 2026, Mon

ಮುತ್ತನಲ್ಲೂರು ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ನಾಗರತ್ನಮ್ಮ ಆಯ್ಕೆ

ಆನೇಕಲ್ ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ನಾಗರತ್ನಮ್ಮ ಹಾಗೂ ಉಪಾಧ್ಯಕ್ಷರಾಗಿ‌ ಮಂಜುಳಮ್ಮ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಪಂಚಾಯಿತಿ ಸದಸ್ಯರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದರು. ಮತಹಾಕಿದ ಎಲ್ಲ ಸದಸ್ಯರಿಗೆ ನೂತನ ಅಧ್ಯಕ್ಷರು ಧನ್ಯವಾದ ಅರ್ಪಿಸಿದರು. ಮುಂದೆ ಎಲ್ಲರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಯನ್ನ ಮತ್ತಷ್ಟು ಅಭಿವೃದ್ಧಿ ಪಡಿಸುವ ಭರವಸೆ ನೀಡಿದರು.

Leave a Reply