ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರಗೊಂಡನಹಳ್ಳಿ ಸಮೀಪವಿರುವ ಎಸ್‌ಸಿ ಕಾಲೋನಿಯಲ್ಲಿ ನೂತನವಾಗಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಸ್ಥಳೀಯರ ಸಮ್ಮುಖದಲ್ಲಿ ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಹಲವು ವರ್ಷಗಳಿಂದ ಕಾಲೋನಿಯಲ್ಲಿ ರಸ್ತೆ ಹಾಗೂ ಚರಂಡಿ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿತ್ತು, ಹೀಗಾಗಿ ಸ್ಥಳೀಯರ ಅನುಕೂಲಕ್ಕಾಗಿ ನೂತನವಾಗಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದ್ದಾರೆ
ಮಾರಗೊಂಡನಹಳ್ಳಿ ಎಸ್‌ಸಿ ಕಾಲೊನಿಯಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಮಂಜುಳಾ ಲಿಂಬಾವಳಿ ಚಾಲನೆ

