Breaking
21 Sep 2026, Mon

ಸರ್ಜಾಪುರದ ಕಲ್ಯಾಣ ಕೋದಂಡರಾಮಸ್ವಾಮಿಯ ಅದ್ದೂರಿ ಬ್ರಹ್ಮರಥೋತ್ಸವ, ಸಾವಿರಾರು ಭಕ್ತಾದಿಗಳು ರಥೋತ್ಸವದಲ್ಲಿ ಭಾಗಿ

ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪವಿರುವ ಐತಿಹಾಸಿಕ ಶ್ರೀ ಕಲ್ಯಾಣ ಕೋದಂಡರಾಮಸ್ವಾಮಿ, ಬ್ರಹ್ಮರಥೋತ್ಸವ ಸಾವಿರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಅಲಂಕೃತ ರಥದಲ್ಲಿ ದೇವರ ಉತ್ಸವ ಮೂರ್ತಿಯನ್ನು ಕೂರಿಸಿ ಊರಿನ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಗೋವಿಂದ ಗೋವಿಂದ ನಾಮಸ್ಮರಣೆಯೊಂದಿಗೆ ಸಾವಿರಾರು ಭಕ್ತಾದಿಗಳು ರಥವನ್ನು ಎಳೆದು ತಮ್ಮ ಕೋರಿಕೆಗಳನ್ನು ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು.

ವಿವಿಧ ಜಾನಪದ ಕಲಾ ತಂಡಗಳು ಆಗಮಿಸಿ ರಥೋತ್ಸವಕ್ಕೆ ಮತ್ತಷ್ಟು ಮೆರಗೂ ತಂದುಕೊಟ್ಟವು. ಬಂದಿದ್ದ ಭಕ್ತಾದಿಗಳಿಗೆ ಪಾನಕ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತು

Leave a Reply