Breaking
21 Sep 2026, Mon

ತಾಲ್ಲೂಕು ಕಚೇರಿ ಆವರಣದಲ್ಲಿ 5ನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ, ಪ್ರತಿಭಟನಾಕಾರರಿಂದ ರಕ್ತದಾನ

ಆನೇಕಲ್ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಗ್ರಾಮ ಆಡಳಿತ ಅಧಿಕಾರಿಗಳು ರಕ್ತದಾನ ಮಾಡುವ ಮೂಲಕ ಸರ್ಕಾರದ ಗಮನವನ್ನು ಸೆಳೆದರು. ತಮ್ಮ ನ್ಯಾಯಯುತ ಬೇಡಿಕೆಯನ್ನು ಈಡೇರಿಸುವಂತೆ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು 5 ದಿನದಿಂದ ಮುಷ್ಕರ ನಡೆಸುತ್ತಿದ್ದಾರೆ.

ಆನೇಕಲ್ ನಲ್ಲಿ ವಿನೂತನವಾಗಿ ರಕ್ತದಾನ ಮಾಡುವ ಮೂಲಕ ತಮ್ಮ ಬೇಡಿಕೆಗಳನ್ನ ಈಡೇರಿಸಬೇಕು ಎಂದು ಸರ್ಕಾರಕ್ಕೆ ಗ್ರಾಮ ಆಡಳಿತ ಅಧಿಕಾರಿಗಳು ಮನವಿ ಸಲ್ಲಿಸಿದರು.

Leave a Reply