Breaking
21 Sep 2026, Mon

ಮೆಟ್ರೋ ಟಿಕೆಟ್ ದರ ಏರಿಕೆ ಖಂಡಿಸಿ ಜಯನಗರದಲ್ಲಿ ಸಿಪಿಐಎಂ ಪ್ರತಿಭಟನೆ, ಬಿಎಂಆರ್‌ಸಿಎಲ್ ವಿರುದ್ಧ ಆಕ್ರೋಶ

ಮೆಟ್ರೋ ಪ್ರಯಾಣದರ ಏರಿಕೆ ಮಾಡಿರುವ ಕ್ರಮವನ್ನು ಖಂಡಿಸಿ ಜಯನಗರದ ಮೆಟ್ರೋ ರೈಲು ನಿಲ್ದಾಣದ ಮುಂಭಾಗ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಿಎಂಆರ್‌ಸಿಎಲ್ ಇತ್ತೀಚೆಗೆ ಶೇಕಡ 42% ಪ್ರಯಾಣ ದರವನ್ನು ಏರಿಕೆ ಮಾಡಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ.

ಅಲ್ಲದೇ ಪ್ರಯಾಣದರವನ್ನ ಏರಿಕೆ ಮಾಡುವಾಗ ಯಾವ ಮಾನದಂಡ ಅನುಸರಿಸಲಾಗಿದೆ ಎಂಬ ಬಗ್ಗೆಯೂ ಸಾರ್ವಜನಿಕರಿಗೆ ಅನುಮಾನ ವ್ಯಕ್ತವಾಗುತ್ತಿದೆ. ಕೂಡಲೇ ಮೆಟ್ರೋ ಅಧಿಕಾರಿಗಳು ಏರಿಕೆ ಆದೇಶವನ್ನು ಹಿಂಪಡೆಯಬೇಕು ಎಂದು ಸಿಪಿಐಎಂ ಪಕ್ಷದ ವತಿಯಿಂದ ಒತ್ತಾಯ ಮಾಡಲಾಯಿತು

Leave a Reply