Breaking
21 Sep 2026, Mon

ಅವಡದೇನಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಏರಿದ ಟಿಪ್ಪರ್

ಆನೇಕಲ್ ತಾಲ್ಲೂಕಿನ ಆವಡದೇನಹಳ್ಳಿ ಗೇಟ್ ಬಳಿ ಟಿಪ್ಪರ್ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಚಂದಾಪುರದಿಂದ ಆನೇಕಲ್ ಮಾರ್ಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿ ಅವಡದೇನಹಳ್ಳಿ ಗೇಟ್ ಬಳಿ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿಯಾಗಿದೆ, ಪರಿಣಾಮ ಚಂದಾಪುರ ಮುಖ್ಯ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಬಳಿಕ ಸ್ಥಳಕ್ಕೆ ಬಂದ ಆನೇಕಲ್ ಪೊಲೀಸರು ಲಾರಿಯನ್ನ ರಸ್ತೆ ಬದಿಗೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು

Leave a Reply