Breaking
10 Feb 2026, Tue

ಚಿಕ್ಕನಹಳ್ಳಿಯಲ್ಲಿ ಶಾಸಕ ಸೋಮಶೇಖ‌ರ್ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ

ಯಶವಂತಪುರ ವಿಧಾನಸಭಾ ಕ್ಷೇತ್ರದ ಚಿಕ್ಕನಹಳ್ಳಿ ಗ್ರಾಮದಲ್ಲಿ ಶಾಸಕರ ಸಮ್ಮುಖದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕ ಸೋಮಶೇಖರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಜನ ಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಿದರು ಜೊತೆಗೆ ವಿವಿಧ ಗ್ರಾಮಗಳ ಕುಂದುಕೊರತೆಗಳ ಕುರಿತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಯಿತು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಹಾಗೂ ವಿಶೇಷ ಚೇತನರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ಶಾಸಕರು ಇದೇ ಕಾರ್ಯಕ್ರಮದಲ್ಲಿ ವಿತರಿಸಿದರು.

Leave a Reply