ಆನೇಕಲ್ ತಾಲೂಕಿನ ಚಿಕ್ಕನಾಗಮಂಗಲ ಗ್ರಾಮದಲ್ಲಿ ಬಿಬಿಎಂಪಿ ಕಸ ಸಂಸ್ಕರಣ ಘಟಕವನ್ನು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕಸ ಸಂಸ್ಕರಣ ಘಟಕದಿಂದ ಬರುತ್ತಿರುವ ಕೆಟ್ಟ ವಾಸನೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮದಲ್ಲಿ ವಿವಿಧ ರೀತಿಯ ಕಾಯಿಲೆಗಳು ಬರುತ್ತಿದ್ದು ಕೂಡಲೇ ಕಸ ಸಂಸ್ಕರಣ ಘಟಕವನ್ನು ಸ್ಥಳಾಂತರ ಮಾಡುವಂತೆ ಸಾರ್ವಜನಿಕರು ಪಟ್ಟು ಹಿಡಿದರು. ಇದರಿಂದ ಕೆಲಕಾಲ ಕಸ ಸಂಸ್ಕರಣ ಘಟಕದ ಮುಂಭಾಗ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು

