Breaking
21 Sep 2026, Mon

ಅತ್ತಿಬೆಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ಶಾಸಕ ಶಿವಣ್ಣ

ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಎಪಿಎಸ್ ಸಂಸ್ಥೆ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಆನೇಕಲ್ ಶಾಸಕ ಶಿವಣ್ಣ ಹಾಗೂ ಎಪಿಎಸ್ ಸಂಸ್ಥೆಯ ಮುಖ್ಯಸ್ಥರಾದ ಮುನಿರಾಜುರವರು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು. ಅತ್ತಿಬೆಲೆ ಸುತ್ತಮುತ್ತಲ ನೂರಾರು ಸಾರ್ವಜನಿಕರು ಆರೋಗ್ಯ ತಪಾಸಣಾ ಶಿಬಿರದಲ್ಲಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಹಲವು ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ರಕ್ತದಾನ ಮಾಡುವಂತೆ ಜಾಗೃತಿ ಮೂಡಿಸಿದರು. ಆಕ್ಸ್ ವರ್ಡ್ ಆಸ್ಪತ್ರೆ, ನಾರಾಯಣ ನೇತ್ರಾಲಯ ಹಾಗೂ ಹೊಸ ಬೆಳಕು ಟ್ರಸ್ಟ್ ಸಹಯೋಗದಲ್ಲಿ ಆರೋಗ್ಯ ಶಿಬಿರ ನಡೆಸಲಾಯಿತು

Leave a Reply