Breaking
21 Jul 2026, Tue

ಜಿಗಣಿಯಲ್ಲಿ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ರೌಡಿಶೀಟರ್ ಮನೆಗಳ ಶೋಧ ಕಾರ್ಯ

ಆನೇಕಲ್ ತಾಲೂಕಿನ ಜಿಗಣಿ ಪೊಲೀಸರಿಂದ ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಯಿತು. ಜಿಗಣಿ ಇನ್ಸ್‌ಪೆಕ್ಟ‌ರ್ ಮಂಜುನಾಥ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹಲವು ರೌಡಿಶೀಟರ್ ಮನೆಗಳಿಗೆ ನುಗ್ಗಿ ಶೋಧ ಕಾರ್ಯ ನಡೆಸಲಾಯಿತು. ತಾಲೂಕಿನ ವಿವಿಧಡೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೌಡಿಗಳ ಮನೆಗಳಿಗೆ ನುಗ್ಗಿ ಪೊಲೀಸರು ವಾರ್ನಿಂಗ್ ನೀಡಿದ್ದಾರೆ. ಸಮಾಜಘಾತಕ ಕೃತ್ಯಗಳು ಎಸಗಿರುವುದು ಕಂಡುಬಂದಲ್ಲಿ ಗೂಂಡಾ ಕಾಯ್ದೆ ಅಡಿ ಗಡಿಪಾರು ಮಾಡುವುದಾಗಿ ವಾರ್ನಿಂಗ್ ನೀಡಲಾಗಿದೆ. ಸಬ್ ಇನ್ಸ್‌ಪೆಕ್ಟ‌ರ್ ಶಿವಲಿಂಗ ನಾಯಕ್ ಸೇರಿದಂತೆ ಹಲವು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು

Leave a Reply