Breaking
21 Jul 2026, Tue

ಹೆಬ್ಬಗೋಡಿಯಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ, ಪ್ರಯಾಣ ದರ ಇಳಿಕೆ ಮಾಡುವಂತೆ ಆಗ್ರಹ

ಹೆಬ್ಬಗೋಡಿಯಲ್ಲಿ ಮೆಟ್ರೋ ಪ್ರಯಾಣದರ ಏರಿಕೆ ಮಾಡಿರುವ ಕ್ರಮವನ್ನು ಖಂಡಿಸಿ ಸಿಪಿಐ ಪಕ್ಷದ ವತಿಯಿಂದ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಹೆಬ್ಬಗೋಡಿ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಎಂಆರ್‌ಸಿಎಲ್ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಇತ್ತಿಚೆಗೆ ಮೆಟ್ರೋ ಪ್ರಯಾಣ ದರದಲ್ಲಿ ಶೇ 42% ಏರಿಕೆ ಮಾಡಿದ್ದು ಇದರಿಂದ ಜನಸಾಮಾನ್ಯರ ಮೇಲೆ ತೀವ್ರ ಹೊರೆ ಬೀಳಲಿದೆ. ಹೀಗಾಗಿ ಸರ್ಕಾರ ಕೂಡಲೇ ಪ್ರಯಾಣದರವನ್ನು ಇಳಿಕೆ ಮಾಡುವಂತೆ ಕಾರ್ಯಕರ್ತರು ಆಗ್ರಹಿಸಿದರು

Leave a Reply