Breaking
20 Sep 2026, Sun

ಇಂಡ್ಲಬೆಲೆಯಲ್ಲಿ ಡಾಂಬರು ರಸ್ತೆ ಮಧ್ಯ ರಾತ್ರೋರಾತ್ರಿ ಕಾಂಪೌಂಡ್ ನಿರ್ಮಾಣ, ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರ ಪರದಾಟ

ಆನೇಕಲ್ ತಾಲೂಕಿನ ಇಂಡ್ಲಬೆಲೆ ಗ್ರಾಮದಲ್ಲಿ ರಸ್ತೆ ಮಧ್ಯ ರಾತ್ರೋ ರಾತ್ರಿ ಖಾಸಗಿ ವ್ಯಕ್ತಿಗಳು ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ.

ಇದರಿಂದ ಪ್ರತಿ ದಿನ ಇದೇ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗುತ್ತಿದೆ. ಡಾಂಬರು ರಸ್ತೆಯ ಮಧ್ಯೆ ಕಾಂಪೌಂಡ್ ನಿರ್ಮಾಣ ಮಾಡಿರುವ ಬಗ್ಗೆ ಸಂಬಂಧಪಟ್ಟ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ರಸ್ತೆ ಮಧ್ಯ ಕಾಂಪೌಂಡ್ ನಿರ್ಮಾಣ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮವನ್ನು ಜರುಗಿಸಬೇಕುವ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply