Breaking
20 Sep 2026, Sun

ಕುಂಬಾರನಹಳ್ಳಿ ಗೇಟ್ ಬಳಿ ಪಾದಚಾರಿಗೆ ಬೈಕ್ ಡಿಕ್ಕಿ, ಅಪಘಾತದಲ್ಲಿ ಪಾದಚಾರಿ ಸ್ಥಳದಲ್ಲೇ ಸಾವು

ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರನಹಳ್ಳಿ ಗೇಟ್ ಬಳಿ ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 56 ವರ್ಷದ ಮುನಿರಾಮಯ್ಯ ಸಾವನ್ನಪ್ಪಿರುವ ದುರ್ದೈವಿ. ರಸ್ತೆ ದಾಟುತ್ತಿದ್ದ ಸಮಯದಲ್ಲಿ ವೇಗವಾಗಿ ಬಂದ ಬುಲೆಟ್ ವಾಹನ ಮುನಿರಾಮಯ್ಯ ರವರಿಗೆ ಡಿಕ್ಕಿ ಹೊಡೆದಿದೆ, ಪರಿಣಾಮ ತೀವ್ರ ರಕ್ತಸ್ರಾವ ಉಂಟಾಗಿ ಮುನಿ ರಾಮಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಇಮಾನ್ ಎಂಬಾತನಿಗೂ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಜಿಗಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply