Breaking
20 Sep 2026, Sun

ಕನಕಪುರ ಮುಖ್ಯ ರಸ್ತೆಯ ಹಾಲಿಡೇ ವಿಲೇಜ್‌ ಬಡಾವಣೆಯಲ್ಲಿ ₹50 ಲಕ್ಷ ವೆಚ್ಚದ ವೈಟ್ ಟ್ಯಾಪಿಂಗ್ ಕಾಮಗಾರಿಗೆ ಶಾಸಕ ಸೋಮಶೇಖರ್ ಚಾಲನೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ಕನಕಪುರ ಮುಖ್ಯ ರಸ್ತೆಯ ಹಾಲಿಡೇ ವಿಲೇಜ್ ಬಡಾವಣೆಯಲ್ಲಿ 50 ಲಕ್ಷ ವೆಚ್ಚದಲ್ಲಿ ರಸ್ತೆಯ ವೈಟ್ ಟ್ಯಾಪಿಂಗ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಸೋಮಶೇಖ‌ರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಡಾವಣೆಯ ರಸ್ತೆಗಳಲ್ಲಿ ಗುಂಡಿಗಳಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ಬಿಬಿಎಂಪಿ ಹಾಗೂ ಕೇಂದ್ರ ವಿಭಾಗದ ಅನುದಾನದಲ್ಲಿ 50 ಲಕ್ಷ ವೆಚ್ಚದಲ್ಲಿ ನೂತನ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ

Leave a Reply