Breaking
21 Jul 2026, Tue

ರಾಗಿಹಳ್ಳಿ ಅರಣ್ಯ ಪ್ರದೇಶದಲ್ಲಿ ಕುಡಿದು ಕಾರು ಚಾಲನೆ, ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವು

ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಾಲನೆ ಮಾಡಿದ ಪರಿಣಾಮ ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಯುವಕರು ಧಾರಣವಾಗಿ ಸಾವನ್ನಪ್ಪಿದ್ದಾರೆ. ಬನ್ನೇರುಘಟ್ಟ ಸಮೀಪದ ರಾಗಿಹಳ್ಳಿ ಅರಣ್ಯದಲ್ಲಿ ಇಂದು ಮುಂಜಾನೆ ಘಟನೆ ನಡೆದಿದೆ. ಕೇರಳ ಮೂಲದ ಅರ್ಶು ಹಾಗೂ ಸಹುಕ್ ಸಾವನ್ನಪ್ಪಿರುವ ಯುವಕರು. ಗೊಟ್ಟಿಗೆರೆ ಸಮೀಪದ ಟಿ ಜಾನ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕರು ಮದ್ಯಪಾನ ಮಾಡಿ ಕಾರನ್ನು ವೇಗವಾಗಿ ಚಾಲನೆ ಮಾಡಿದ್ದಾರೆ. ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಇಬ್ಬರು ಯುವಕರಾದ ದೇವ ನಾರಾಯಣ್ ಹಾಗೂ ಸಾಹಿಲ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply