ಆನೇಕಲ್ ಪಟ್ಟಣದ ಪುರಸಭಾ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಹಲವು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಯಿತು. ಆನೇಕಲ್ ತಹಶಿಲ್ದಾರ್ ಶಶಿಧರ್ ಮಾಡ್ಯಾಳ್ ಹಾಗೂ ತಾಲೂಕು ಪಂಚಾಯಿತಿಯಲ್ಲಿ ಇಓ ಮಂಜುನಾಥ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ತಾಲೂಕಿನ ವಿವಿಧ ಭಾಗಗಳ ದಲಿತ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲದೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ತಹಶೀಲ್ದಾರ್ ಶಶಿಧರ್ ರವರಿಗೆ ಮನವಿ ಸಲ್ಲಿಸಲಾಯಿತು.
ಯಾವುದೇ ಕುಂದು ಕೊರತೆಗಳಿದ್ದರೂ ಸಭೆಯಲ್ಲಿ ಚರ್ಚಿಸುವಂತೆ ದಲಿತ ಮುಖಂಡರಿಗೆ ತಹಶೀಲ್ದಾರ್ ಸೂಚನೆ ನೀಡಿದರು

