Breaking
20 Sep 2026, Sun

ಮನೆ ಕಳ್ಳತನ ಮಾಡುತ್ತಿದ್ದ ಖದೀಮನನ್ನ ಬಂಧಿಸಿದ ಬೇಗೂರು ಪೊಲೀಸರು, ಬಂದಿತನಿಂದ 14 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ಜಪ್ತಿ

ಮನೆ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಖದೀಮನನ್ನ ಬಂಧಿಸುವಲ್ಲಿ ಬೇಗೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯಿಂದ 14 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರಕರಣ ಹಾಗೂ ಕೆ ಆರ್ ಪುರಂ ಠಾಣಾ ವ್ಯಾಪ್ತಿಯ ಒಂದು ಪ್ರಕರಣದಲ್ಲಿ ಪೊಲೀಸರು 180 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಬಂದಿದ್ದ ಮನೆ ಕಳ್ಳತನ ಹಾಗೂ ಬೈಕ್‌ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಬೇಗೂರು ಇನ್ಸ್‌ಪೆಕ್ಟರ್‌ ಕೃಷ್ಣಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸಲಾಗಿದೆ

Leave a Reply