Breaking
20 Sep 2026, Sun

ಆನೇಕಲ್ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೆ ಏರಿಸಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ವಿಚಾರ ಸಂಕೀರ್ಣ

ಆನೇಕಲ್ ತಾಲ್ಲೂಕಿನ 20 ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೆಗೆ ಏರಿಸಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನ ಖಂಡಿಸಿ ಆನೇಕಲ್ ಪಟ್ಟಣದಲ್ಲಿ ಚಿನ್ಮಯ ಸೇವಾ ಸಂಸ್ಥೆ ವತಿಯಿಂದ ವಿಚಾರ ಸಂಕೀರ್ಣ ಆಯೋಜಿಸಲಾಗಿತ್ತು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಹಲವು ಪ್ರಗತಿಪರ ಚಿಂತಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಯಾವುದೇ ಸೂಕ್ತ ಮಾನದಂಡ ಅನುಸರಿಸದೇ ಗ್ರಾಮ ಪಂಚಾಯಿತಿಯನ್ನು ಪುರಸಭೆ ಹಾಗೂ ನಗರಸಭೆಯಾಗಿ ಸರ್ಕಾರ ಮೇಲ್ದರ್ಜೆಗೆ ಏರಿಸಲು ಹೊರಟಿದೆ. ಇದು ಅವೈಜ್ಞಾನಿಕ. ಈ ನಿರ್ಧಾರದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಲಿದ್ದು

ಸರ್ಕಾರ ಕೂಡಲೇ ಮೇಲ್ದರ್ಜೆಗೆ ಏರಿಸುವ ಕ್ರಮವನ್ನ ಹಿಂಪಡೆಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಯಿತು

Leave a Reply