Breaking
20 Sep 2026, Sun

ಬೊಮ್ಮನಹಳ್ಳಿಯಲ್ಲಿ ಬಿಬಿಎಂಪಿ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ, ಬಿಬಿಎಂಪಿ ಆಯುಕ್ತ ತುಷಾ‌ರ್ ಗಿರಿನಾಥ್, ಶಾಸಕ ಸತೀಶ್ ರೆಡ್ಡಿ ಭಾಗಿ

ಬೊಮ್ಮನಹಳ್ಳಿಯಲ್ಲಿ ಬಿಬಿಎಂಪಿ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ ಇಂದು ಆಲೋಚನೆ ಮಾಡಲಾಗಿತ್ತು, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ಜನರ ಬಳಿಗೆ ಹೋಗಿ ಅವರ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಅಲ್ಲದೆ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಆಯುಕ್ತರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು, ಜನರ ಸಂಕಷ್ಟಗಳಿಗೆ ಕೂಡಲೇ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು ಜೊತೆಗೆ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಲಾಯಿತು,

Leave a Reply