Breaking
20 Sep 2026, Sun

ಮೆಟ್ರೋ ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ನಗರದಲ್ಲಿ ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ಬಿಎಂಆರ್‌ಸಿ ಎಲ್ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು ಇತ್ತೀಚೆಗೆ ಮೆಟ್ರೋ ಪ್ರಯಾಣ ದರವನ್ನ ಶೇಕಡ 40ರಷ್ಟು ಏರಿಕೆ ಮಾಡಲಾಗಿದೆ ಇದರಿಂದ ಬೆಂಗಳೂರಿನ ಸಾಮಾನ್ಯ ಜನರಿಗೆ ಹೊರೆಯಾಗುತ್ತಿದೆ. ಯಾವುದೇ ಮಾನದಂಡ ಅನುಸರಿಸದೆ ಏಕಾಯಕಿ ಶೇಕಡ 40ರಷ್ಟು ಏರಿಕೆ ಮಾಡಿರುವುದು ಖಂಡನೀಯವಾಗಿದೆ ಕೂಡಲೇ ಬಿ ಎಂ ಆರ್ ಸಿ ಎಲ್ ಅಧಿಕಾರಿಗಳು ಮೆಟ್ರೋ ಪ್ರಯಾಣ ದರವನ್ನು ಇಳಿಕೆ ಮಾಡುವಂತೆ ವಾಟಾಳ್ ನಾಗರಾಜ್ ಪ್ರತಿಭಟನೆಯನ್ನು ನಡೆಸಿದರು.

Leave a Reply