Breaking
21 Jul 2026, Tue

ವಾಜರಹಳ್ಳಿಯಲ್ಲಿ ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಶಾಸಕ ಸೋಮಶೇಖರ್ ರವರಿಂದ ಚಾಲನೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ವಾಜರಹಳ್ಳಿ ಸಮೀಪದ ಬಿಸಿಸಿ ಹೆಚ್ಎಸ್ ಬಡಾವಣೆಯಲ್ಲಿ ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಸೋಮಶೇಖರ್ ಹಾಗೂ ಸ್ಥಳೀಯರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಹಲವು ವರ್ಷಗಳಿಂದ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಸಾರ್ವಜನಿಕರ ಅನುಕೂಲಕ್ಕಾಗಿ ಇಂದು ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ನೀರಿನ ಸಮಸ್ಯೆಯನ್ನು ಬಗೆಹರಿಸಿದ ಶಾಸಕ ಸೋಮಶೇಖರ್ ರವರಿಗೆ ಸ್ಥಳೀಯರು ಧನ್ಯವಾದ ಅರ್ಪಿಸಿದರು.

Leave a Reply