Breaking
10 Feb 2026, Tue

ಪ್ರೀತಿ ನಿರಾಕರಿಸಿದಕ್ಕೆ ಹುಡುಗಿಯ ಕಾರು ಬೈಕ್ ಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ

ಪ್ರೇಯಸಿ ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಕಾರು ಹಾಗೂ ಬೈಕಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾನೆ. ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪಾಗಲ್ ಪ್ರೇಮಿ ರಾಹುಲ್ ಎಂಬಾತ ಹುಡುಗಿಯ ಮನೆ ಬಳಿ ತೆರಳಿ ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಹಾಗೂ ಕಾರಿಗೆ ಬೆಂಕಿ ಹಚ್ಚಿದ್ದಾನೆ. ರಾಹುಲ್ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಹುಡುಗಿ ಪ್ರೀತಿ ನಿರಾಕರಿಸಿದ್ದಾಳೆ. ಹೀಗಾಗಿ ರೊಚ್ಚಿಗೆದ್ದು ರಾಹುಲ್ ಬೈಕ್ ಹಾಗೂ ಕಾರಿಗೆ ಬೆಂಕಿ ಹಚ್ಚಿದ್ದಾನೆ. ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply