Breaking
20 Sep 2026, Sun

ಬನಶಂಕರಿ ದೇವಾಲಯದಲ್ಲಿ ಸಾಮೂಹಿಕ ವಿವಾಹ, ಜೋಡಿಗಳಿಗೆ ಶುಭ ಹಾರೈಸಿದ ಆರ್ ಅಶೋಕ್

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕನಕಪುರ ಮುಖ್ಯ ರಸ್ತೆಯ ಬನಶಂಕರಿ ದೇವಾಲಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು. ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಚಾಲನೆ ನೀಡಿದರು. 70 ನೂತನ ಜೋಡಿಗಳು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಪ್ರತಿ ವರ್ಷ ಬನಶಂಕರಿ ದೇವಾಲಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತದೆ. ಅದರಂತೆ ಈ ವರ್ಷವೂ ಅದ್ದೂರಿಯಾಗಿ ನಡೆದ ಸಾಮೂಹಿಕ ವಿವಾಹದಲ್ಲಿ ಆರ್ ಅಶೋಕ್ ಭಾಗವಹಿಸಿ ನವ ಜೋಡಿಗಳಿಗೆ ಶುಭ ಹಾರೈಸಿದರು

Leave a Reply