ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಸಾಯಿ ಗಾರ್ಡನ್ ಬಡಾವಣೆಯಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಕಂದಾಯ ಸಚಿವ ಕೃಷ್ಣಭೈರೇಗೌಡ ಹಾಗೂ ಸ್ಥಳೀಯ ನಿವಾಸಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಸಾಯಿ ಗಾರ್ಡನ್ ಬಡಾವಣೆಯಲ್ಲಿ ರಸ್ತೆಗಳು ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ನಿವಾಸಿಗಳ ಅನುಕೂಲಕ್ಕಾಗಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಎಂದು ಶಾಸಕರು ಚಾಲನೆ ನೀಡಿದ್ದಾರೆ

