Breaking
20 Sep 2026, Sun

ಕ್ಷುಲಕ ಕಾರಣಕ್ಕೆ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಕೊಲೆ, ಮುತ್ತಾನಲ್ಲೂರು ಗ್ರಾಮದಲ್ಲಿ ಘಟನೆ

ಕ್ಷುಲ್ಲಕ ಕಾರಣಕ್ಕೆ ದೊಣ್ಣೆಯಿಂದ ಹೊಡೆದು ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆನೇಕಲ್ ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮದಲ್ಲಿ ಇಂದು ಘಟನೆ ನಡೆದಿದೆ. 40 ವರ್ಷದ ಮುತ್ತುಕುಮಾ‌ರ್ ಸಾವನ್ನಪ್ಪಿರುವ ವ್ಯಕ್ತಿ, ಕೊಲ್ಕತ್ತಾ ಮೂಲದ ಗುರು ಎಂಬಾತ ದೊಣ್ಣೆಯಿಂದ ಹೊಡೆದು ಮುತ್ತು ಕುಮಾರನನ್ನ ಹತ್ಯೆ ಮಾಡಿದ್ದಾನೆ. ಇಬ್ಬರು ಕುಡಿದ ಮತ್ತಿನಲ್ಲಿ ಜಗಳವಾಡಿಕೊಂಡು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸ್ಥಳಕ್ಕೆ ಬೆಂ.ಗ್ರಾಮಾಂತರ ಎಸ್ಪಿ ಸಿ ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೂರ್ಯ ಸಿಟಿ ಪೊಲೀಸರು ಆರೋಪಿಯನ್ನ ಬಂಧಿಸಿ ತನಿಖೆ ಮುಂದುವರಿಸಿದ್ದಾರೆ

Leave a Reply