Breaking
21 Jul 2026, Tue

ದೇವರಬೀಸನಹಳ್ಳಿಯಲ್ಲಿ ನೂತನ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ಮಂಜುಳಾ ಲಿಂಬಾವಳಿ

ಮಹದೇವಪುರ ವಿಧಾನಸಭಾ ಕ್ಷೇತ್ರದ ದೇವರಬೀಸನಹಳ್ಳಿ ಗ್ರಾಮದಲ್ಲಿ 50 ಲಕ್ಷ ವೆಚ್ಚದಲ್ಲಿ ನೂತನವಾಗಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಸ್ಥಳೀಯ ಮುಖಂಡರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಗ್ರಾಮದ ಕೆಲವು ರಸ್ತೆಗಳು ಗುಂಡಿಮಯವಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನವಾಗಿ ರಸ್ತೆ ಹಾಗೂ ಚರಂಡಿ ನಿರ್ಮಿಸುವ ಕಾಮಗಾರಿಗೆ ಶಾಸಕಿ ಮಂಜುಳಾ ಭೂಮಿ ಪೂಜೆ ನೆರವೇರಿಸಿದರು|

Leave a Reply