Breaking
20 Sep 2026, Sun

ಆನೇಕಲ್‌ನಲ್ಲಿ ಶಿಥಿಲಾವಸ್ಥೆ ತಲುಪಿರುವ PWD ಕಟ್ಟಡ ಕಾಮಗಾರಿ

ಆನೇಕಲ್ ಪಟ್ಟಣದ ತಾಲೂಕು ಪಂಚಾಯಿತಿ ಮುಂಭಾಗ ಕಳೆದ 20 ವರ್ಷಗಳ ಹಿಂದೆ ನಿರ್ಮಾಣವಾದ PWD ಇಲಾಖೆಯ ಕಟ್ಟಡ ಕಾಮಗಾರಿ ಶಿಥಿಲಾವಸ್ಥೆ ತಲುಪಿದೆ. ಕಾಮಗಾರಿಗೆ ಬಳಸಿರುವ ಕಬ್ಬಿಣದ ಸರಳುಗಳು ತುಕ್ಕು ಹಿಡಿಯುತ್ತಿದ್ದು ಅನೈತಿಕ ಚಟುವಟಿಕೆಯ ತಾಣವಾಗಿ ಮಾರ್ಪಾಡಾಗಿದೆ. ಮಾಜಿ ಕೇಂದ್ರ ಸಚಿವ ನಾರಾಯಣಸ್ವಾಮಿ ರವರ ಅವಧಿಯಲ್ಲಿ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ಅನುದಾನದ ಕೊರತೆ ಹಾಗೂ ಗುತ್ತಿಗೆದಾರನ ನಿರ್ಲಕ್ಷದಿಂದ ಕಾಮಗಾರಿ ಅರ್ಧಕ್ಕೆ ನಿಂತು ಈಗ ಕಸ ಹಾಕುವ ಡಂಪಿಂಗ್ ಯಾರ್ಡ್ ಆಗಿ ಈ ಜಾಗ ಮಾರ್ಪಾಡಾಗಿದೆ. ಜೊತೆಗೆ ಸಾರ್ವಜನಿಕರು ಈ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡಿ ಈ ಜಾಗವನ್ನ ಕೊಳಕು ಮಾಡಿದ್ದಾರೆ. ಹೀಗಾಗಿ ಇಲ್ಲಿನ ಅವ್ಯವಸ್ಥೆ ಸರಿಪಡಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

Leave a Reply