Breaking
20 Sep 2026, Sun

ರೌಡಿಶೀಟರ್ ಹೈದರ್ ಆಲಿ ಕೊಲೆ ಪ್ರಕರಣ, ಏಳು ಮಂದಿ ಬಂಧನ

ಬೆಂಗಳೂರಿನ ಅಶೋಕನಗರದಲ್ಲಿ ನಡೆದಿದ್ದ ರೌಡಿಶೀಟರ್ ಹೈದರ್ ಆಲಿ ಕೊಲೆ ಪ್ರಕರಣದ ಏಳು ಮಂದಿ ಆರೋಪಿಗಳನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ನಯಾಜ್ ಪಾಷಾ ಹಾಗೂ ರಹೀದ್ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಶಾಸಕ ಹ್ಯಾರಿಸ್ ಆಪ್ತನಾಗಿದ್ದ ಹೈದರ್ ಅಲಿಯನ್ನ ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಕೊಲೆಯ ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ

Leave a Reply