Breaking
21 Jul 2026, Tue

ಕೆ ಆರ್ ಪುರಂ ಪೊಲೀಸರಿಂದ ಕುಖ್ಯಾತ ಬೈಕ್ ಕಳ್ಳನ ಬಂಧನ

ಐಷಾರಾಮಿ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಖದೀಮನನ್ನ ಬಂಧಿಸುವಲ್ಲಿ ಕೆಆರ್ ಪುರಂ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಸಾದ್ ಬಾಬು ಬಂದಿತ ಆರೋಪಿ. ಬೆಂಗಳೂರಿನ ವಿವಿಧ ಭಾಗಗಳಲ್ಲಿ 100 ಕ್ಕೂ ಹೆಚ್ಚು ಬೆಲೆ ಬಾಳುವ ದ್ವಿಚಕ್ರವಾಹನಗಳನ್ನು ಈತ ಕಳ್ಳತನ ಮಾಡಿ ಆಂಧ್ರಪ್ರದೇಶದಲ್ಲಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಪಡೆದು ಆರೋಪಿಯನ್ನ ಬಂಧಿಸಿರುವ ಪೊಲೀಸರು 1.45 ಕೋಟಿ ಮೌಲ್ಯದ 100 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

Leave a Reply