Breaking
20 Sep 2026, Sun

ಕರ್ಪೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬೆಸ್ತಮಾನಹಳ್ಳಿ ಕೃಷ್ಣಪ್ಪ ಆಯ್ಕೆ

ಆನೇಕಲ್‌ ತಾಲೂಕಿನ ಕರ್ಪೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬೆಸ್ತಮಾನಹಳ್ಳಿ ಕೃಷ್ಣಪ್ಪ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರನ್ನ ಸದಸ್ಯರು ಆಯ್ಕೆ ಮಾಡಿದರು. ನೂತನ ಅಧ್ಯಕ್ಷರಿಗೆ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು. ಸದಸ್ಯರ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಯನ್ನು ಮಾದರಿ ಪಂಚಾಯಿತಿಯಾಗಿ ಮಾಡುವುದಾಗಿ ನೂತನ ಅಧ್ಯಕ್ಷರಾದ ಕೃಷ್ಣಪ್ಪ ಭರವಸೆ ನೀಡಿದರು. ಜೊತೆಗೆ ಮತ ಹಾಕಿದ ಎಲ್ಲಾ ಪಂಚಾಯತಿ ಸದಸ್ಯರಿಗೂ ಧನ್ಯವಾದ ಸಲ್ಲಿಸಿದರು

Leave a Reply